ಭಾರತೀಯ ತೈಲ ನಿಗಮ ನಿಯಮಿತದಲ್ಲಿ 493 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ವಿದ್ಯಾರ್ಹತೆ: ಮೆಟ್ರಿಕ್, 10+2, ಐಟಿಐ ಮತ್ತು ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ: ಅಕ್ಟೋಬರ್ 31,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಸ್ಟೈಫೆಂಡ್: ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಭಾರತೀಯ ತೈಲ ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್ https://iocl.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 12,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

LEAVE A REPLY

Please enter your comment!
Please enter your name here