ಶನಿವಾರ 13,800 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲು


ರಾಜ್ಯದಲ್ಲಿ ಶನಿವಾರ 13,800 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26,83 ಲಕ್ಷ ದಾಟಿದೆ. ಅದೇ ರೀತಿ ನಿನ್ನೆ ಒಂದೇ ದಿನ 25,346 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 23,83 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,68 ಲಕ್ಷಕ್ಕಿಂತಲೂ ಹೆಚ್ಚು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮೇ ತಿಂಗಳಲ್ಲೂ ಲಕ್ಷ ಕೋಟಿ ದಾಟಿದ ತೆರಿಗೆ


ಮೇ ತಿಂಗಳಿನಲ್ಲಿ ದೇಶದ ಹೆಚ್ಚಿನ ರಾಜ್ಯಗಳು ಲಾಕ್ ಡೌನ್ ವಿಧಿಸಿದ್ದರೂ, ತೆರಿಗೆ ಸಂಗ್ರಹ ಉತ್ತಮವಾಗಿದೆ. 1,02 ಲಕ್ಷ ಕೋಟಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವಾಗಿದೆ. ಕಳೆದ 8 ತಿಂಗಳಿನಿಂದ ತೆರಿಗೆ ಸಂಗ್ರಹ ಲಕ್ಷ ಕೋಟಿ ದಾಟುತ್ತಿದೆ.

ಇಬ್ಬರು ಐಎಎಸ್ ಅಧಿಕಾರಿಗಳ ದಿಡೀರ್ ವರ್ಗಾವಣೆ


ಮೈಸೂರಿನ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಶನಿವಾರ ರಾತ್ರಿ ವರ್ಗಾವಣೆ ಮಾಡಿದೆ. ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಮತ್ತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದೆ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾ ನಾಗ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಗೌರ್ನೆನ್ಸ್) ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆಗೊಳಿಸಲಾಗಿದೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಭಿಷೇಕ್ ಬ್ಯಾನರ್ಜಿ


ಪಶ್ಚಿಮಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ತೃಣಮೂಲ ಕಾಂಗ್ರೆಸಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ತಮ್ಮ ಅಳಿಯ ಅಭಿಷೇಕ್ ಬ್ಯಾನರ್ಜಿಯನ್ನು ನೇಮಿಸಿದ್ದಾರೆ.
ಮಮತಾ ಅಧ್ಯಕ್ಷತೆಯಲ್ಲಿ ಕೋಲ್ಕತಾದಲ್ಲಿ ನಡೆದ ಪಕ್ಷದ ಸಂಘಟನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು.

LEAVE A REPLY

Please enter your comment!
Please enter your name here