1. ಸೋಮವಾರ 11,958 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲು
ರಾಜ್ಯದಲ್ಲಿ ಸೋಮವಾರ 11,958 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,07 ಲಕ್ಷ ದಾಟಿದೆ. ಅದೇ ರೀತಿ ನಿನ್ನೆ ಒಂದೇ ದಿನ 27,299 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 24,36 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,38 ಲಕ್ಷಕ್ಕಿಂತಲೂ ಹೆಚ್ಚು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2. ವಾರದ ಮೊದಲ ವಹಿವಾಟಿನ ದಿನ ಏರಿಕೆ ಕಂಡ ಷೇರು ಮಾರುಕಟ್ಟೆ
ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೋಮವಾರ ಸೆನ್ಸೆಕ್ಸ್ ಹಾಗೂ ನಿಫ್ಟಿಯಲ್ಲಿ ಏರಿಕೆ ಕಂಡುಬಂದಿದೆ. ದಿನದಂತ್ಯಕ್ಕೆ ಸೆನ್ಸೆಕ್ಸ್ 228.46 ಅಂಕಗಳ ಏರಿಕೆಯೊಂದಿಗೆ 52,328.51ರಲ್ಲಿ ವಹಿವಾಟು ಮುಕ್ತಾಯಗೊಂಡಿತು. ಇನ್ನು ನಿಫ್ಟಿ 81.40 ಅಂಕಗಳ ಏರಿಕೆಯೊಂದಿಗೆ 15,751.65ರಲ್ಲಿ ವಹಿವಾಟು ಕೊನೆಗೊಂಡಿತು.

3. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ
ಕೇಂದ್ರ ಸರ್ಕಾರದ ವತಿಯಿಂದಲೇ ದೇಶಾದ್ಯಂತ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಜೂನ್ 21ರಿಂದ ಉಚಿತವಾಗಿ ಲಸಿಕೆ ಲಭ್ಯವಾಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಗರಿಷ್ಟ ₹150ಗಳನ್ನು ಮಾತ್ರ ಸೇವಾ ಶುಲ್ಕವಾಗಿ ಪಡೆಯಬಹುದು ಎಂಬ ಷರತ್ತು ವಿಧಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತಿಳಿಸಿದ್ದಾರೆ.

4. ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ
ನಾಯಕ ಸುನೀಲ್ ಚೆಟ್ರಿ ಗಳಿಸಿದ 2 ಗೋಲುಗಳ ನೆರವಿನಿಂದ ಭಾರತ ತಂಡ 2023ರ ಏಷ್ಯನ್ ಕಪ್ ಹಾಗೂ ಫೀಫಾ ವಿಶ್ವಕಪ್ ಅರ್ಹತಾ ಸುತ್ತಿನ ಸೋಮವಾರದ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 2-0 ಅಂತರದಲ್ಲಿ ಜಯ ಸಾಧಿಸಿದೆ.

LEAVE A REPLY

Please enter your comment!
Please enter your name here