1. ಮಂಗಳವಾರ 9,808 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲು
ರಾಜ್ಯದಲ್ಲಿ ಮಂಗಳವಾರ 9,808 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,17 ಲಕ್ಷ ದಾಟಿದೆ. ಅದೇ ರೀತಿ ನಿನ್ನೆ ಒಂದೇ ದಿನ 23,449 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 24,60 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,25 ಲಕ್ಷಕ್ಕಿಂತಲೂ ಹೆಚ್ಚು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2. ಅಲ್ಪ ಪ್ರಮಾಣದ ಇಳಿಕೆ ಕಂಡ ಷೇರು ಮಾರುಕಟ್ಟೆ
ಮುಂಬೈ ಷೇರು ಮಾರುಕಟ್ಟೆಯಲ್ಲಿ ಮಂಗಳವಾರ ಸೆನ್ಸೆಕ್ಸ್ ಹಾಗೂ ನಿಫ್ಟಿಯಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ. ದಿನದಂತ್ಯಕ್ಕೆ ಸೆನ್ಸೆಕ್ಸ್ 52.94 ಅಂಕಗಳ ಇಳಿಕೆಯೊಂದಿಗೆ 52,275.57ರಲ್ಲಿ ವಹಿವಾಟು ಮುಕ್ತಾಯಗೊಂಡಿತು. ಇನ್ನು ನಿಫ್ಟಿ 11.55 ಅಂಕಗಳ ಇಳಿಕೆಯೊಂದಿಗೆ 15,740.10ರಲ್ಲಿ ವಹಿವಾಟು ಕೊನೆಗೊಂಡಿತು.

3. ಶಾಸಕ ಸಿ. ಎಂ. ಉದಾಸಿ ನಿಧನ
ಹಾವೇರಿ ಜಿಲ್ಲೆಯ ಹಾನಗಲ್ ನ ಬಿಜೆಪಿ ಶಾಸಕ ಸಿ. ಎಂ ಉದಾಸಿ ಅವರು ಮಂಗಳವಾರ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಮಂಗಳವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಸಂಸ್ಕಾರ ಹುಟ್ಟೂರಿನಲ್ಲಿ ಬುಧವಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

4. ಖಾಸಗಿ ಆಸ್ಪತ್ರೆಗೆ ಲಸಿಕೆ ದರ ನಿಗದಿ
ಖಾಸಗಿ ಆಸ್ಪತ್ರೆಗಳು ಕೊರೊನಾ ಲಸಿಕೆಗೆ ವಿಧಿಸಬಹುದಾದ ಗರಿಷ್ಠ ದರವನ್ನು ಕೇಂದ್ರ ಸರ್ಕಾರ ಮಂಗಳವಾರ ನಿಗದಿಪಡಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಯಾವ ದರದಲ್ಲಿ ಲಸಿಕೆ ನೀಡಲಾಗುತ್ತದೆ ಎಂಬುದನ್ನು ಪರಿಶೀಲಿಸಲು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ.

LEAVE A REPLY

Please enter your comment!
Please enter your name here