1. ಬುಧವಾರ 10,959 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲು
ರಾಜ್ಯದಲ್ಲಿ ಬುಧವಾರ 10,959 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,28 ಲಕ್ಷ ದಾಟಿದೆ. ಅದೇ ರೀತಿ ನಿನ್ನೆ ಒಂದೇ ದಿನ 20,246 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 24,80 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,15 ಲಕ್ಷಕ್ಕಿಂತಲೂ ಹೆಚ್ಚು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2. ಸತತ ಎರಡನೇ ದಿನವೂ ಇಳಿಕೆ ಕಂಡ ಷೇರು ಮಾರುಕಟ್ಟೆ
ಮುಂಬೈ ಷೇರು ಮಾರುಕಟ್ಟೆಯಲ್ಲಿ ಬುಧವಾರ ಕೂಡಾ ಸೆನ್ಸೆಕ್ಸ್ ಹಾಗೂ ನಿಫ್ಟಿಯಲ್ಲಿ ಇಳಿಕೆ ಕಂಡುಬಂದಿದೆ. ದಿನದಂತ್ಯಕ್ಕೆ ಸೆನ್ಸೆಕ್ಸ್ 333.93 ಅಂಕಗಳ ಇಳಿಕೆಯೊಂದಿಗೆ 51,941.64ರಲ್ಲಿ ವಹಿವಾಟು ಮುಕ್ತಾಯಗೊಂಡಿತು. ಇನ್ನು ನಿಫ್ಟಿ 104.75 ಅಂಕಗಳ ಇಳಿಕೆಯೊಂದಿಗೆ 15,635.35ರಲ್ಲಿ ವಹಿವಾಟು ಕೊನೆಗೊಂಡಿತು.

3. 2021-22ನೇ ಮಾರುಕಟ್ಟೆ ಋತುವಿನ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಸಂಪುಟದ ಅನುಮೋದನೆ
ಮುಂಗಾರು ಆರಂಭವಾಗುತ್ತಿದ್ದಂತೆಯೇ ರೈತರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಭತ್ತ, ಜೋಳ, ರಾಗಿ, ಹತ್ತಿ ಸೇರಿದಂತೆ ಒಟ್ಟು 14 ಬೆಳೆಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಎಲ್ಲ ಕಡ್ಡಾಯ ಮುಂಗಾರು ಬೆಳೆಗಳಿಗೆ 2021-22ನೇ ಮಾರುಕಟ್ಟೆ ಋತುವಿಗಾಗಿ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ಹೆಚ್ಚಳ ಮಾಡಲು ತನ್ನ ಅನುಮೋದನೆ ನೀಡಿದೆ.

4. ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನೇನು ಒಂದು ವರ್ಷ ಬಾಕಿ ಇರುವಂತೆಯೇ ಕಾಂಗ್ರೆಸ್ ನ ಪ್ರಭಾವಿ ನಾಯಕ, ರಾಹುಲ್ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಜಿತಿನ್ ಪ್ರಸಾದ್ ಕಾಂಗ್ರೆಸ್ ತೊರೆದು, ಬಿಜೆಪಿ ಪಕ್ಷ ಸೇರಿದ್ದಾರೆ. ಬುಧವಾರ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜಿತಿನ್ ಪ್ರಸಾದ್ ಅವರು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಮಲ ಪಾಳಯಕ್ಕೆ ಸೇರಿದರು.

LEAVE A REPLY

Please enter your comment!
Please enter your name here