1. ಕೈಗೆ ಕೈ ಕೊಟ್ಟು ಕಮಲ ಮುಡಿದ ಖುಷ್ಬು
ತಮಿಳು ಚಿತ್ರರಂಗದ ಖ್ಯಾತ ಚಿತ್ರನಟಿ – ರಾಜಕಾರಣಿ ಖುಷ್ಬೂ ಸುಂದರ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸೋಮವಾರ ಬಿಜೆಪಿ ಸೇರ್ಪಡೆಗಿಂತ ಮೊದಲೇ ತಾನು ಈವರೆಗೆ ಇದ್ದ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದರು. ನಂತರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.

2. ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ
ಗ್ವಾಲಿಯರ್ ನ ರಾಜಮಾತೆ, ಬಿಜೆಪಿ ಸಹಸಂಸ್ಥಾಪಕಿ ವಿಜಯರಾಜೇ ಸಿಂಧಿಯಾ ಅವರ ಜನ್ಮಶತಮಾನೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ.ಗಳ ವಿಶೇಷ ನಾಣ್ಯವನ್ನು ಸೋಮವಾರ ಬಿಡುಗಡೆಗೊಳಿಸಿದರು.


3. ರಾಜ್ಯ ಸಚಿವ ಸಂಪುಟದಲ್ಲಿ ಸಣ್ಣ ಬದಲಾವಣೆ
ರಾಜ್ಯ ಸಚಿವ ಸಂಪುಟದಲ್ಲಿ ಮೂವರು ಸಚಿವರ ಖಾತೆಗಳನ್ನು ಮರುಹಂಚಿಕೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಡಿದ್ದಾರೆ. ಡಾ. ಕೆ ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣದ ಜೊತೆ ಆರೋಗ್ಯ ಇಲಾಖೆಯನ್ನು, ಬಿ. ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆಯನ್ನು ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಲೋಕೋಪಯೋಗಿ ಇಲಾಖೆಯನ್ನು ನೀಡಲಾಗಿದೆ. ಉಳಿದ ಪ್ರಮುಖ ಖಾತೆಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ.

4. ಆರ್ ಸಿ ಬಿಗೆ 5ನೇ ಗೆಲುವು
ಎಬಿ ಡಿವಿಲಿಯರ್ಸ್ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ದಾಳಿಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಎದುರು 82 ರನ್ನುಗಳ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಬಿ ಡಿವಿಲಿಯರ್ಸ್ ಅವರ ಸ್ಪೋಟಕ 73 ರನ್ ಗಳ ನೆರವಿನಿಂದ ನಿಗದಿತ 20 ಓವರುಗಳಲ್ಲಿ 2 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಎದುರಾಳಿ ತಂಡದ ಬಿಗುವಿನ ಬೌಲಿಂಗ್ ದಾಳಿ ಎದುರು ಉತ್ತರಿಸಲಾಗದೆ 20 ಓವರುಗಳಲ್ಲಿ 9 ವಿಕೆಟ್ ನಷ್ಟಕ್ಕೆ 11 2 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಆರ್ ಸಿ ಬಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿತು.

5. ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಲ್ಲಿ ಚೆನ್ನೈ
ಡ್ರೀಮ್ 11 ಐಪಿಎಲ್ 13ನೇ ಆವೃತ್ತಿಯ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಅಂಕಪಟ್ಟಿಯಲ್ಲಿ 4 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಪಂದ್ಯ ಬಾರಿ ಮಹತ್ವವನ್ನು ಪಡೆದುಕೊಂಡಿದೆ. ಹೈದರಾಬಾದ್ ತಂಡವು ಈ ಪಂದ್ಯವನ್ನು ಗೆದ್ದು ಮುಂದಿನ ಹಂತಕ್ಕೇರಲು ದಾರಿ ಸುಗಮವಾಗಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಈ ಪಂದ್ಯ ದುಬೈನಲ್ಲಿ ಸಂಜೆ 7.30 ಕ್ಕೆ ಆರಂಭವಾಗಲಿದೆ.

LEAVE A REPLY

Please enter your comment!
Please enter your name here