1. ಶನಿವಾರ 419 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲು
ರಾಜ್ಯದಲ್ಲಿ ಶನಿವಾರ 419 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,44 ಲಕ್ಷ ದಾಟಿದೆ. ಅದೇ ರೀತಿ ನಿನ್ನೆ ಒಂದೇ ದಿನ 430 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 9.26 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6 ಸಾವಿರಕ್ಕಿಂತಲೂ ಕಡಿಮೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2. ರೋಹಿತ್ ಶರ್ಮಾ ಭರ್ಜರಿ ಶತಕ: ಭಾರತ 300 ಕ್ಕೆ 6
ಚೆನ್ನೈಯ ಚೇಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ದಿನ ಉಭಯ ತಂಡಗಳು ಸಮಾನ ಗೌರವ ಪಡೆದುಕೊಂಡವು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ರೋಹಿತ್ ಶರ್ಮಾ ಅವರ ಭರ್ಜರಿ ಶತಕ ಹಾಗೂ ರಹಾನೆ ಅವರ ತಾಳ್ಮೆಯ ಅರ್ಧ ಶತಕದ ನೆರವಿನಿಂದ ಮೊದಲ ದಿನದಂತ್ಯಕ್ಕೆ 88 ಓವರ್ ಗಳಲ್ಲಿ 300 ರನ್ ಗಳಿಸಿದೆ. ಇಂಗ್ಲೆಂಡ್ ಬೌಲರ್ ಗಳು 6 ವಿಕೆಟ್ ಕಬಳಿಸಿ, ಭಾರತಕ್ಕೆ ತಿರುಗೇಟು ನೀಡಿದರು.

3. ಚೆನ್ನೈಯಿನ್ ಎಫ್ ಸಿ ವಿರುದ್ಧ ರೋಚಕ ಡ್ರಾ ಸಾಧಿಸಿದ ಎಫ್ ಸಿ ಗೋವಾ
ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯ ಏಳನೇ ಆವೃತ್ತಿಯ 92ನೇ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಚೆನ್ನೈಯಿನ್ ಎಫ್ ಸಿ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಎಫ್ ಸಿ ಗೋವಾ ಕೊನೆಯ ಕ್ಷಣದಲ್ಲಿ ಗೋಲು ಗಳಿಸಿ, ಪಂದ್ಯವನ್ನು 2-2ರಲ್ಲಿ ಡ್ರಾಗೊಳಿಸಿತು. ಇದರಿಂದ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಪಡೆದುಕೊಂಡವು. ಗೋವಾ 24 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. 18 ಅಂಕಗಳೊಂದಿಗೆ ಚೆನ್ನೈ ತಂಡ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

4. ಒಡಿಶಾ ಎಫ್ ಸಿಗೆ ನಾರ್ಥ್ ಈಸ್ಟ್ ಯುನೈಟೆಡ್ ಸವಾಲು
ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯ ಏಳನೇ ಆವೃತ್ತಿಯ 93ನೇ ಪಂದ್ಯದಲ್ಲಿ ನಾರ್ಥ್ ಈಸ್ಟ್ ಯುನೈಟೆಡ್ ಹಾಗೂ ಒಡಿಶಾ ಎಫ್ ಸಿ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲು ನಾರ್ಥ್ ಈಸ್ಟ್ ತಂಡ ಹೋರಾಟ ನಡೆಸಲಿದೆ. ಈ ಪಂದ್ಯ ಸಂಜೆ 5.00 ಗಂಟೆಗೆ ಆರಂಭವಾಗಲಿದೆ.

5. ಜಮ್ಶೆಡ್ ಪುರ ಎಫ್ ಸಿಗೆ ಎಟಿಕೆ ಮೋಹನ್ ಬಗಾನ್ ಸವಾಲು
ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯ ಏಳನೇ ಆವೃತ್ತಿಯ 94ನೇ ಪಂದ್ಯದಲ್ಲಿ ಎಟಿಕೆ ಮೋಹನ್ ಬಗಾನ್ ಹಾಗೂ ಜಮ್ಶೆಡ್ ಪುರ ಎಫ್ ಸಿ ತಂಡಗಳು ಮುಖಾಮುಖಿಯಾಗುತ್ತಿವೆ. ಸತತ ನಾಲ್ಕನೇ ಜಯದ ನಿರೀಕ್ಷೆಯಲ್ಲಿ ಎಟಿಕೆ ತಂಡವಿದೆ. ಈ ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದೆ.

LEAVE A REPLY

Please enter your comment!
Please enter your name here